ಸಕಲೇಶಪುರ: ಅಕ್ರಮ ಗಾಂಜಾ ಮಾರಾಟ ಯತ್ನ- ಇಬ್ಬರ ಬಂಧನ, 269 ಗ್ರಾಂ ಗಾಂಜಾ ವಶ

Sakleshpur City Police Station conducted a massive operation and arrested two accused who were trying to illegally sell ganja and seized 269 grams of ganja.

ಸಕಲೇಶಪುರ: ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ 269 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಡಿಸೆಂಬರ್ 26, 2025ರಂದು ಹೊಸ ಬಸ್ ನಿಲ್ದಾಣದ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬಂಧಿತರನ್ನು ಜೋಯಲ್ ಬಿನ್ ಥಾಮಸ್ ಮ್ಯಾತ್ಯೋ (A1) ಹಾಗೂ ಸಫಾನ್ ಬಿನ್ ಅಬ್ದುಲ್ ಸತ್ತಾರ್ (A2) ಎಂದು ಗುರುತಿಸಲಾಗಿದ್ದು, ಇಬ್ಬರೂ ಕೇರಳ ಮೂಲದವರಾಗಿದ್ದು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವನರಾಜು, ಸಬ್ ಇನ್ಸ್‌ಪೆಕ್ಟರ್ ಮಹೇಶ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪೃಥ್ವಿ, ರೇವಣ್ಣ, ಶ್ರೀಧರ್, ಸೋಮಶೇಖರ್, ಚಂದ್ರಕಾಂತ್ ಮತ್ತು ಮಧು ಅವರುಗಳು ಭಾಗವಹಿಸಿದ್ದರು.

ನಗರ ಪ್ರದೇಶದಲ್ಲಿ ಮಾದಕ ವಸ್ತುಗಳ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳನ್ನು ಮುಂದುವರೆಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Sakleshpur City Police Station conducted a massive operation and arrested two accused who were trying to illegally sell ganja and seized 269 grams of ganja.