ಸಕಲೇಶಪುರ : ಸಕಲೇಶಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಶಿವಕುಮಾರ್ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು ನೋವಿನ ಸಂಗತಿಯಾಗಿದೆ.
ಶಿವಕುಮಾರ್ ಅವರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ (ಕೆಯುಡಬ್ಲ್ಯೂಜೆ) ಶಿವಾನಂದ ತಗಡೂರು ಅವರು, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.










