ಮಾಡಾಳು: ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಶ್ರೀ ರುದ್ರಮುನಿ ಸ್ವಾಮೀಜಿ ಸಂತಾಪ

Shri Rudramuni Swamiji of Niranjan Peetha has expressed his deepest condolences, saying that he was deeply shocked to hear the news of the passing of MLA and former minister Shri Shamanur Shivashankarappa on Sunday evening.

ಮಾಡಾಳು: ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಯುತ ಶಾಮನೂರು ಶಿವಶಂಕರಪ್ಪ ಭಾನುವಾರ ಸಂಜೆ ವಿಧಿವಶರಾದ ಸುದ್ದಿ ತಿಳಿದು ಅತೀವ ಅಘಾತ ಉಂಟು ಮಾಡಿದೆ ಎಂದು ನಿರಂಜನ ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ ಉದ್ಯಮಿಯಾಗಿ ಆರು ಬಾರಿ ಶಾಸಕರಾಗಿ ಸಚಿವರಾಗಿ ಒಂದು ಬಾರಿ ಸಂಸದರಾಗಿ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆಅಲ್ಲದೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಶ್ರೀಯುತರು ವೀರಶೈವ ಸಮುದಾಯದ ಪ್ರಮುಖರಾಗಿ ಸಮಾಜದ ಏಕತೆ ಮತ್ತು ಏಳಿಗೆಗಾಗಿ ನಿರಂತರ ಶ್ರಮಿಸಿದ್ದ ಇವರ ಅಗಲಿಕೆಯಿಂದ ಒಬ್ಬ ಹಿರಿಯ ಸಾಧಕ ರಾಜಕಾರಣಿಯನ್ನು ಸಮುದಾಯದ ಒಬ್ಬ ಮಾರ್ಗದರ್ಶಕರನ್ನು ಕಳೆದುಕೊಂಡಿದೆ ಶ್ರೀಯುತರ ಆತ್ಮಕ್ಕೆ ಭಗವಂತ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇವೆ.

ಶ್ರೀಯುತರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಬಸವಾದಿ ಶಿವಶರಣರು ದಯ ಪಾಲಿಸಲಿ ಹಾರೈಸುತ್ತೇವೆ ಎಂದು ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದರು.