ಚನ್ನರಾಯಪಟ್ಟಣ: ಮಹಾನ್ ಸೈನಿಕರ ಶೌರ್ಯದ ಸ್ಮರಣಾರ್ಥ ಭೀಮ ಕೋರೆಂಗಾವ್ ವಿಜಯೋತ್ಸವ ಆಚರಣೆ ಸಮಿತಿ ಹಾಸನ ಇವರ ವತಿಯಿಂದ ಜ.20 ರಂದು ಬೆಳಗ್ಗೆ 10 ಕ್ಕೆ ಹಾಸನದ ಪ್ರಜಾಸೌಧದ ಪಕ್ಕದಲ್ಲಿರುವ ರಸ್ತೆಯಲ್ಲಿ ಭೀಮಾ ಕೊರೆಗಾಂವ್ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಚರಣೆ ಸಮಿತಿಯ ಅಧ್ಯಕ್ಷ ಎಚ್.ಕೆ.ಸಂದೇಶ್ ತಿಳಿಸಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿ,
ಅಂಬೇಡ್ಕರ್ ಅವರಿಗೆ ಸಂವಿಧಾನ ಬರೆಯಲು ಸ್ಫೂರ್ತಿ ನೀಡಿದ ಪ್ರಮುಖ ಸಂಗತಿಗಳಲ್ಲಿ ಭೀಮಾ ಕೊರೆಗಾಂವ್ ವಿಜಯ ಕೂಡ ಒಂದಾಗಿದೆ ಎಂದರು.
ಈ ಘಟನೆಯ ಹಿನ್ನಲೆ, ವಿದ್ಯಮಾನಗಳ ಕುರಿತು ಇಂದಿನ ತಲೆಮಾರಿಗೆ ದಾಟಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಸಂಘಟಿಸಲಾಗಿದೆ.
ಪೇಶ್ವೆಗಳು ಜಾತಿ ವ್ಯವಸ್ಥೆಯಡಿ ಆಡಳಿತ ನಡೆಸುತ್ತಿದ್ದರು. ಪೇಶ್ವೆ ಬಾಜಿರಾಯನನ್ನು ಸೋಲಿಸಲು ಬಂದ ಬ್ರಿಟಿಷರು ಮಹಾರ ಯೋಧರ ನೆರವು ಕೋರಿದ್ದರು. ಆದರೆ, ಮಹಾರ ಯೋಧರು ಪೇಶ್ವೆಗೆ ಷರತ್ತಿನ ಬೆಂಬಲ ನೀಡಲು ಆತನ ಬಳಿಗೆ ತನ್ನ ದಂಡನಾಯಕ ಸಿದ್ಧನಾಯಕನನ್ನು ಕಳಿಸಿದರು’
‘ಬಾಜಿರಾಯ ಬ್ರಾಹ್ಮಣ ಸಂಪ್ರದಾಯ ಪಾಲಿಸುವುದೇ ತನ್ನ ಧರ್ಮ ಎಂದು ಹೇಳಿ, ಅಸ್ಪೃಶ್ಯ ಯೋಧರ ಬೆಂಬಲ ತಿರಿಸ್ಕರಿಸಿ, ಸಿದ್ಧನಾಯಕನನ್ನು ಅಪಮಾನಿಸಿ ಕಳಿಸುತ್ತಾನೆ.
ಇದರಿಂದ ಆಕ್ರೋಶಗೊಂಡ ಮಹಾರ್ ಯೋಧರು ಬಾಜಿರಾಯನ ಬೆನ್ನು ಮೂಳೆ ಮುರಿಯಲು ಬ್ರಿಟಿಷರ ಪರ ಯುದ್ಧ ಮಾಡಲು ಒಪ್ಪಿಕೊಳ್ಳುತ್ತಾರೆ’ ಎಂದು ಹೇಳಿದರು.
‘1818ರ ಜನವರಿ 1 ರಂದು ಈಗಿನ ಪುಣೆ ಹತ್ತಿರದ ಭೀಮಾ ನದಿ ದಂಡೆ ಮೇಲಿನ ಕೋರೆಗಾಂವ್ ಬಳಿ 28 ಸಾವಿರ ಸೈನಿಕರಿದ್ದ ಪೇಶ್ವೆ ಹಾಗೂ 500 ಮಹಾರ್ ಯೋಧರ ಮಧ್ಯೆ ಯುದ್ಧ ನಡೆದು ಕೊರೆಗಾಂವ್ ವೀರರು ಅವಿರತವಾಗಿ ಹೋರಾಟ ನಡೆಸಿ ಎರಡನೇ ಬಾಜಿರಾಯನ ಮಗನನ್ನು ಕೊಂದ ನೆನಪಿಗೆ ವಿಜಯೋತ್ಸವ ಆಚರಿಸಲಾಗುತ್ತಿದೆ. ಕ್ರೂರ ಜಾತಿ ಪದ್ದತಿ, ಅಸ್ಪೃಶ್ಯತೆಯ ನಡುವೆಯೂ ದಲಿತರು ನಡೆಸಿದ ಹೋರಾಟ ಅಂಬೇಡ್ಕರ್ ಅವರ ಬದುಕಿಗೆ ತಿರುವು ಕೊಟ್ಟ ಸಂಗತಿಯಾಗಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಪ್ರತಿ ವರ್ಷ ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಹುತಾತ್ಮರ ಸ್ಮರಣಾರ್ಥ ಬ್ರಿಟಿಷ್ ಸರ್ಕಾರ ನಿರ್ಮಿಸಿರುವ ವೀರ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸುತ್ತಿದ್ದರು. ಮಹಾರ್ ಯೋಧರ ತ್ಯಾಗ ವ್ಯರ್ಥವಾಗಲು ಬಿಡಬಾರದು. ಅವರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು ಎಂದರು.
ಕಾರ್ಯಕ್ರಮಕ್ಕೆ ಅಂಬೇಡ್ಕರ್ ಮೊಮ್ಮಗ ಭೀಮರಾವ್ ಯಶ್ವಂತ್‌ರಾವ್ ಅಂಬೇಡ್ಕರ್ ಹಾಗೂ ಭಾರತೀಯ ಭೌದ್ಧ ಮಹಾಸಭಾದ ಅಧ್ಯಕ್ಷ ಹಾಗೂ ನಿವೃತ್ತ ಡಿಸಿಪಿ ಎಸ್.ಸಿದ್ದರಾಜು ಹಾಗೂ ಭಾರತೀಯ ಬೌದ್ಧ ಮಹಾಸಭಾದ ಅನೇಕರನ್ನು ಒಳಗೊಂಡಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಂದು ಭೀಮ ಕೋರೆಗಾಂವ್ ವಿಜಯ ಸ್ತಂಭ ಮೆರವಣಿಗೆಯನ್ನು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಭವ್ಯವಾಗಿ ಹಮ್ಮಿಕೊಳ್ಳಲು ಸಿದ್ಧತೆ ಕೈಗೊಳ್ಳಳಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ಬಾಂಧವರು ಜಾತ್ಯಾತೀತವಾಗಿ ಮತ್ತು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಐತಿಹಾಸಿಕ ಭೀಮಾಕೋರೆಗಾಂವ ವಿಜಯೋತ್ಸವ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ರಾಜು ಗೊರೂರು, ಮಂಜು ಕುರುವಂಕ ಭಾಗವಹಿಸಿದ್ದರು.
Speaking at a press conference at the town’s Journalists’ House on Saturday, he said, “The Bhima Koregaon victory was one of the important things that inspired Ambedkar to write the Constitution.”










