ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮತ್ತೆ ಬ್ಯಾಟಿಂಗ್ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಸಿಎಂ ಆಗಿ ಆಯ್ಕೆಯಾಗಿರುವುದು 5 ವರ್ಷಕ್ಕೆ. ಇದನ್ನು ಹಲವು ಬಾರಿ ಹೇಳಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಹೇಳಿದ್ದಾರೆ. ಹೀಗಾಗಿ ಮತ್ತೆ ಮತ್ತೆ ಈ ಪ್ರಶ್ನೆ ಮತ್ತು ಚರ್ಚೆ ಬೇಡ ಎಂದು ಸೋಮವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, ಬಜೆಟ್ ಬಳಿಕ ನಾಯಕತ್ವ ಬದಲಾವಣೆಯಾಗುತ್ತದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ನಾನು ಸಿಎಂ ರೇಸ್ ನಲ್ಲೂ ಇಲ್ಲ ಎಂದರು.
ಸಿದ್ದರಾಮಯ್ಯ ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿರುವುದು. ಈ ಬಗ್ಗೆ ನಾವು ಹಲವು ಬಾರಿ ಹೇಳಿಕೆ ನೀಡಿದ್ದೇವೆ. ಸಿಎಂ ಸಹ ಹಲವು ಬಾರಿ ಹೇಳಿದ್ದಾರೆ. ಮತ್ತೆ ಈ ಬಗ್ಗೆ ಚರ್ಚೆ ಬೇಡ. ಅಧಿಕಾರ ಹಂಚಿಕೆ ನಿರ್ಧಾರ ಮಾಡುವ ಸ್ಥಾನದಲ್ಲೂ ನಾನು ಇಲ್ಲ ಎಂದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಮಯ ಬಂದಾಗ ನೋಡೋಣ ಎಂದರು.
Speaking to reporters in the city today, Satish Jarkiholi said, “I have never said anywhere that there will be a leadership change after the budget. I am not in the CM race either.”










