ಹಾಸನ: ಭಾರತೀಯ ಮಹಿಳೆಯರಿಗೆ ರಾಣಿ ಅಬ್ಬಕ್ಕ ಸ್ಪೂರ್ತಿಯಾಗಿದ್ದಾರೆ ಎಂದು ಕಲಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಶ್ರೀನಿವಾಸ್ ರವರು ತಿಳಿಸಿದರು.
ಜ್ಞಾನಧಾರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ವೀರ ವನಿತೆಯರನ್ನು ಕುರಿತ ವಿಚಾರಗೋಷ್ಠಿಯನ್ನು ಉದ್ಘಾಟಿಸಿ,ಮಾತನಾಡಿದ ಅವರು ರಾಣಿ ಅಬ್ಬಕ್ಕ ಮತ್ತು ಹಲವು ವೀರ ಹೋರಾಟಗಾರ್ತಿರ ವಿಚಾರಗಳನ್ನು ತಿಳಿಯುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯ ಅವರು ಇಂದಿನ ಯುವ ಜನಾಂಗಕ್ಕೆ ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಧಾರೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕಾಂತರಾಜು ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಡೇವಿಡ್ ಕುಮಾರ್ ಮತ್ತು ಜ್ಞಾನಧಾರೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಹೇಮಂತ್ ಕುಮಾರ್ ಉಪಸ್ಥಿತರಿದ್ದರು.










