ಬೆಂಗಳೂರು ,ಮಾರ್ಚ್,9,2026 (www.kannadapost.com):ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು ಇಂದಿನಿಂದ ಬಜೆಟ್ ಅಧಿವೇಶನ ಶುರವಾಗಲಿದೆ.
ಇಂದಿನಿಂದ ಬಜೆಟ್ ಮೇಲಿನ ಕುರಿತು ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಚರ್ಚೆ ವೇಳೆ ಬಜೆಟ್ ಲೋಪಗಳನ್ನ ಪ್ರಸ್ತಾಪಿಸಲು ವಿಪಕ್ಷ ಬಿಜೆಪಿ, ಜೆಡಿಎಸ್ ಸದಸ್ಯರು ಸಜ್ಜಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಟೀಕಿಸಿದ್ದು ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಚೊಂಬು ನೀಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಮಂಡಲ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ನಾಳೆ ಸಂಜೆ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದೆ.










