ಚನ್ನರಾಯಪಟ್ಟಣ: ತಾಲ್ಲೂಕಿನ ಶ್ರವಣಬೆಳಗೊಳದ ಅತಿಥಿ ಗೃಹದಲ್ಲಿ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಅ.26ರ ಭಾನುವಾರ ರಾಜ್ಯ ಮಟ್ಟದ ಜಿಲ್ಲಾಧ್ಯಕ್ಷರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಶ್ರವಣಬೆಳಗೊಳ ಶ್ರೀ ದಿಗಂಬರ ಜೈನ ಸಂಸ್ಥಾನ ಮಠದ ಪೀಠಾಧ್ಯಕ್ಷ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ, ಬೆಂಗಳೂರಿನ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಸಕ ಸಿ.ಎನ್.ಬಾಲಕೃಷ್ಣ ಉದ್ಘಾಟನೆ ನೆರವೇರಿಸಲಿದ್ದಾರೆ.
ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಎನ್.ಅಶೋಕ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪಧಾದಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.










