1.4 C
Munich
Home News Politics ಸೂರಜ್ ರೇವಣ್ಣ ಮಹಾನ್ ದೈವ ಭಕ್ತ ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ:...

ಸೂರಜ್ ರೇವಣ್ಣ ಮಹಾನ್ ದೈವ ಭಕ್ತ ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ: ಎಚ್.ಡಿ.ರೇವಣ್ಣ

ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಎಚ್.ಡಿ.ರೇವಣ್ಣ

ಮೈಸೂರು:ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವ್ನು ಬಹಳ ಬೇಗ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ.ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡೋಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು.

ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಗತಿ? ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಹೋದರೆ ರೇವಣ್ಣ ಏನೋ ಹೇಳಿಕೊಟ್ಟ ಅಂತ ಹೇಳುತ್ತಾರೆ‌. ಹೀಗಾಗಿ ನಾನು ಹೋಗಲ್ಲ ಎಂದರು.

ನಿನ್ನೆ ನನ್ನ ಪತ್ನಿ ಭವಾನಿ ಮಕ್ಕಳ ಭೇಟಿಗೆ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ ಎಂದರು.

ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ‌. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.

error: Content is protected !!