ಹಾಸನ: ಶ್ರೀ ಸಿದ್ದರಾಮೇಶ್ವರರ ಜಯಂತೋತ್ಸವವನ್ನು ಜನವರಿ 14 (ಬುಧವಾರ) ರಂದು ಹಾಸನ ನಗರದಲ್ಲಿ ಭಕ್ತಿಭಾವ ಮತ್ತು ವೈಭವದಿಂದ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ಹಾಸನ ತಾಲ್ಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದ್ದಾರೆ.
ಬೆಳಿಗ್ಗೆ 10.00 ಗಂಟೆಗೆ ಹಾಸನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಶ್ರೀ ಸಿದ್ದರಾಮೇಶ್ವರರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ, ಪುಷ್ಪಾರ್ಚನೆಯೊಂದಿಗೆ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಂತರ ವಿವಿಧ ಕಲಾತಂಡಗಳೊಂದಿಗೆ ಹಾಸನ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.
ಇದಾದ ಬಳಿಕ ಬೆಳಿಗ್ಗೆ 11.00 ಗಂಟೆಗೆ ಹಾಸನ ನಗರದ ಕಲಾಭವನದಲ್ಲಿ ಧಾರ್ಮಿಕ ಸಮಾರಂಭ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಸ್ವಾಮೀಜಿಗಳು, ಸಂಸದರು, ಶಾಸಕರು, ಜನಪ್ರತಿನಿಧಿಗಳು, ಮಾನ್ಯ ಜಿಲ್ಲಾಧಿಕಾರಿಗಳು, ತಹಶೀಲ್ದಾರ್, ಹಾಸನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಶ್ರೀ ಸಿದ್ದರಾಮೇಶ್ವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಹಾಗೂ ವಿವಿಧ ಸಂಘ–ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಟ್ಟಾಯ ಶಿವಕುಮಾರ್ ಮನವಿ ಮಾಡಿದ್ದಾರೆ.
The birth anniversary of Shri Siddarameshwara will be celebrated with devotion and splendor in Hassan city on January 14 (Wednesday), said Kattaya Shivakumar, President of the All India Veerashaiva Lingayat Mahasabha, Hassan Taluk Unit.










