ಹಾಸನ: ಮಾಜಿ ಸಂಸದ ಹಾಲಿ ಬಬೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ಡಿ.18 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅಂದು ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಘು ದಾಸರಕೊಪ್ಪಲು ತಿಳಿಸಿದರು.
ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಘಟಕದ ಎಲ್ಲ ಪದಾಧಿಕಾರಿಗಳು, ಜಿಲ್ಲಾ ಯುವ ಕಾಂಗ್ರೆಸ್, ಹಾಸನ ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಕೆ.ಪಿ.ಸಿ.ಸಿ. ಸದಸ್ಯರು ಹಾಗೂ ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಅಭಿಮಾನಿ ಬಳಗದ ಸಹಯೋಗದಲ್ಲಿ ನಮ್ಮ ಜನನಾಯಕರ ಹುಟ್ಟು ಹಬ್ಬವನ್ನು ಭವ್ಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.
ಡಿ.18 ರಂದು ಬೆಳಿಗ್ಗೆ 11.30ಕ್ಕೆ ನಗರದ ಹೇಮಾವತಿ ಪ್ರತಿಮೆ ಸಮೀಪ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಣೆ ಮಾಡಲಾಗುವುದು. ನಂತರ 12.30ಕ್ಕೆ ಸಾರ್ವಜನಿಕರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಸಂಜೆ ನಗರದ ನೀರುಬಾಗಿಲು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿ.ಕೆ. ಸುರೇಶ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಹಾಗೂ ದೇವಸ್ಥಾನದ ಮುಂಭಾಗ ಈಡುಗಾಯಿ ಒಡೆಯುವ ಕಾರ್ಯಕ್ರಮ ಇದೆ.
ಬಳಿಕ ಆಜಾದ್ ರಸ್ತೆಯಲ್ಲಿರುವ ಗುಜರಾತಿ ಬಾಬಾ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. ತರುವಾಯ ಎನ್.ಆರ್. ವೃತ್ತದಲ್ಲಿರುವ ಚರ್ಚ್ ನಲ್ಲಿ ವಿಶೇಷ ಪೂಜೆ ನಡೆಯಲಿದೆ.
ರಾತ್ರಿ ನಗರದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರಿಗೆ ಬೆಡ್ ಶೀಟ್ ವಿತರಿಸುವ ಸಮಾಜ ಸೇವಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮಗಳ ಮಾಹಿತಿ ನೀಡಿದರು.
ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ಮಾಜಿ ಸಚಿವ ಬಿ.ಶಿವರಾಂ, ಹಿರಿಯ ಮುಖಂಡರು, ಪರಾಜಿತ ಅಭ್ಯರ್ಥಿಗಳು, ವಿವಿಧ ಘಟಕಗಳ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು ಜಿಲ್ಲೆಯ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಗೊರೂರು, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಯ್ಯುಂ, ಉಪಾಧ್ಯಕ್ಷರಾದ ಹರೀಶ್, ರಾಘವೇಂದ್ರ ಪ್ರಸಾದ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್, ನಗರಪಾಲಿಕೆ ಸದಸ್ಯ ಆಶು ಆಸೀಫ್ ಇದ್ದರು.
The birthday celebration of former MP and current Babul president D.K. Suresh was held in the city on December 18, and various programs were organized on that day, said District Congress Committee General Secretary Raghu Dasarakoppalu.










