ಸಕಲೇಶಪುರ: ಹಿರಿಯ ಪತ್ರಕರ್ತ ಹಾಗೂ ಲೇಖಕ ಮಲ್ನಾಡ್ ಮೆಹಬೂಬ್ ಅವರ ನೀ ಇಲ್ಲದ ಜಗತ್ತು ಹೇಗಿರುತ್ತಿತ್ತು..? ಎಂಬ ಲೇಖನಗಳ ಸಂಕಲನದ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜನವರಿ 8, 2026ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಸಕಲೇಶಪುರದ ಲಯನ್ಸ್ ಸೇವಾ ಮಂದಿರದಲ್ಲಿ ಆಯೋಜಿಸಲಾಗಿದೆ. ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜೈ ಭೀಮ್ ಮಂಜು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು, ಕಾರ್ಯನಿರತ ಪತ್ರಕರ್ತರ ಸಂಘ, ಡ್ರಗ್ಸ್ ಮುಕ್ತ ಸಕಲೇಶಪುರ ಆಂದೋಲನ ಹಾಗೂ ವಿವಿಧ ಸಂಘ–ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕರು ಹಾಗೂ ಡ್ರಗ್ಸ್ ಮುಕ್ತ ಭಾರತ ಆಂದೋಲನದ ಪ್ರಮುಖರಾದ ಎಚ್.ಎಂ. ವಿಶ್ವನಾಥ್ ವಹಿಸಲಿದ್ದು, ಸಕಲೇಶಪುರದ ಸಾಹಿತಿ ,ಚಿಂತಕ, ಪ್ರಸಾದ್ ರಕ್ಷಿದಿ ಅವರು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಮುರಳಿ ಮೋಹನ್, ಆನೆಮಹಲ್ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹಿಂ ಕೆ. ಮುಸ್ಲಿಯಾರ್, ಯೋಜನಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಮುಫೀಜ್, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜೈ ಮಾರುತಿ ದೇವರಾಜ್, ಭೀಮ ವಿಜಯ ಪತ್ರಿಕೆಯ ಸಂಪಾದಕ ನಾಗರಾಜ್ ಹೆತ್ತೂರು, ನಮ್ಮ ಹಾಸನ ಟಿವಿ ಮುಖ್ಯಸ್ಥ ತೌಫೀಕ್ ಅಹಮದ್, ಪ್ರಕಾಶಕ ಅಝರ್ ಉದ್ದೀನ್ (ಮಂಡ್ಯ), ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷೆ ಶ್ರೀಮತಿ ಶಾರದ ಗುರುಮೂರ್ತಿ, ಉಪಸ್ಥಿತರಿರುತ್ತಾರೆ.
ಇದೇ ಸಂದರ್ಭದಲ್ಲಿ ಲಯನ್ಸ್ ಸಮುದಾಯ ಭವನದ ಅಧ್ಯಕ್ಷ ಸಂಜೀತ್ ಶೆಟ್ಟಿ, ಲೇಖಕ ಯೆಡೇಹಳ್ಳಿ ಆರ್. ಮಂಜುನಾಥ್, ಡಾ. ಫಾದರ್ ಫ್ರಾನ್ಸಿಸ್ ಚಿರಯ್ಕಲ್ (ಹೆಗ್ಗದ್ದೆ ಗ್ರಾಮ) ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಯೋಗೇಶ್ ಮಾತನಾಡಿ, ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಕೇಂದ್ರ ಸಾಹಿತ್ಯ ಪರಿಷತ್ತು, ಚುಟುಕು ಸಾಹಿತ್ಯ ಪರಿಷತ್ತು, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ನಂಜಮ್ಮ ಮಹಿಳಾ ಸಮಾಜ, ಸರ್ಕಾರಿ ನೌಕರರ ಸಂಘ, ಶಿಕ್ಷಕರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಮಲೆನಾಡು ರಕ್ಷಣಾ ಸೇನೆ, ಮಾನವ ಬಂಧುತ್ವ ವೇದಿಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ವಿವಿಧ ಯುವ, ಮಹಿಳಾ, ಕಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳು ಸಹಕಾರ ನೀಡಿವೆ ಎಂದು ಹೇಳಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ
ದಯಾನಂದ್ ಮಾತನಾಡಿ, ಸಕಲೇಶಪುರದ ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಕಾರ್ಯಕ್ರಮದ ಪ್ರೋತ್ಸಾಹಕರಾಗಿ ಕೈಜೋಡಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪತ್ರಕರ್ತ ಹಾಗೂ ಲೇಖಕ ಮಲ್ನಾಡ್ ಮೆಹಬೂಬ್ ಕಾರ್ಯನಿರತ ಪತ್ರಕರ್ತ ಸಂಘದ ನಿಯೋಜಿತ ಅಧ್ಯಕ್ಷ ಕಾಂತರಾಜ್ ಉಪಸ್ಥಿತರಿದ್ದರು.
The book launch program of senior journalist and author Malnad Mehboob’s collection of articles titled “What Would the World Be Like Without You..?” is being organized on Thursday, January 8, 2026 at 11 am at the Lions Seva Mandir, Sakleshpur.










