ಹಾಸನ : ಬಸವ ಅಭಿಯಾನದ ಸಂಸ್ಕೃತಿ ಕಾರ್ಯಕ್ರಮದಲ್ಲಿ ಧರ್ಮ ದಂಗಲ್ ಸನ್ನಿವೇಶ ನಿರ್ಮಾಣ ಆದ ಘಟನೆ ನಗರದ ಕಲಾಭವನದಲ್ಲಿ ನಡೆದಿದೆ.ಹಾಸನಾಂಬ ಕಲಾಕ್ಷೇತ್ರದಲ್ಲಿ ಭಾನುವಾರ ಸಂಜೆ ಬಸವ ಸಂಸ್ಕೃತಿ ಅಭಿಯಾನದ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಆಶೀರ್ವಚನದ ನೀಡುತ್ತಿದ್ದ ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಿದೆ. ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ನಮೂದಿಸಬೇಕು ಎಂದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ಇದನ್ನು ಕೇಳಿ ವೇದಿಕೆಯಲ್ಲೇ ವಿರೋಧ ವ್ಯಕ್ತಪಡಿಸಿದ ಲಿಂಗಾಯತ ಸಮುದಾಯದ ಕೆಲ ಮುಖಂಡರು ಅಪಸ್ವರ ಎತ್ತಿದರು.ಇದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣ ಆಗಿತ್ತು.ಇದರಿಂದ ಎಚ್ಚೆತ್ತ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ಮೊಟಕುಗೊಳಿಸಿದರು.
ಈ ವೇಳೆ ಮಧ್ಯೆ ಪ್ರವೇಶಿಸಿದ ಹಳೇಬೀಡು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಎಲ್ಲರನ್ನೂ ಸಮಾಧಾನಪಡಿಸಿದರು.










