14.2 C
Munich
Home News ಶ್ರವಣಬೆಳಗೊಳ: ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿಯವರ ಕನಸಿನ ಪ್ಯಾರಾ ಮೆಡಿಕಲ್ ಕಾಲೇಜು ಸೆ.14ರಂದು ಉದ್ಘಾಟನೆ

ಶ್ರವಣಬೆಳಗೊಳ: ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿಯವರ ಕನಸಿನ ಪ್ಯಾರಾ ಮೆಡಿಕಲ್ ಕಾಲೇಜು ಸೆ.14ರಂದು ಉದ್ಘಾಟನೆ

ಚನ್ನರಾಯಪಟ್ಟಣ: ತಾಲ್ಲೂಕಿನ ಶ್ರವಣಬೆಳಗೊಳದ ಶ್ರೀ ದಿಗಂಬರ ಜೈನ ಮಹಾ ಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ಕನಸಾಗಿದ್ದ ಪ್ಯಾರಾ ಮೆಡಿಕಲ್ ಕಾಲೇಜು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ನೇತೃತ್ವದಲ್ಲಿ ಸೆ. 14 ರಂದು ಉದ್ಘಾಟನೆಗೊಳ್ಳುತ್ತಿದೆ.
ಪಟ್ಟಣದ ಗೊಮ್ಮಟನಗರದಲ್ಲಿರುವ ಬಾಹುಬಲಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಭಾನುವಾರ ಕಾರ್ಯಕ್ರಮ ನಡೆಯಲಿದೆ. ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ನಿರ್ದೇಶಕಿ ಡಾ. ಸುಜಾತಾ ರಾಥೋಡ್, ಆರ್.ಜಿ.ಯು.ಹೆಚ್.ಎಸ್. ಕುಲಪತಿ ಡಾ. ಬಿ.ಸಿ.ಭಗವಾನ್, ಪ್ಯಾರಾಮೆಡಿಲಕ್ ಬೋರ್ಡ್ ಸದಸ್ಯ ಕಾರ್ಯದರ್ಶಿ ಡಾ. ಕೆ.ಆರ್.ವಿಜಯಕುಮಾರ್, ಕರ್ನಾಟಕ ರಾಜ್ಯ ಶುಶ್ರೂಷಾ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಮೇಲ್ವಿಚಾರಕ ಎಂ.ಎಸ್.ಶರತ್‌ಬಾಬು ಮುಂತಾದವರು ಕಾರ್ಯಕ್ರಮ ಪಾಲ್ಗೊಳ್ಳಲಿದ್ದಾರೆ.
error: Content is protected !!