ಪತ್ರಿಕಾ ದಿನಾಚರಣೆ ಅಂಗವಾಗಿ ಪತ್ರಕರ್ತರಿಗೆ ನಾಳೆ ಕೆಸರು ಗದ್ದೆ ಕ್ರೀಡಾಕೂಟ

ಹಾಸನ :ಪತ್ರಿಕಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಆಲೂರು ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತರಿಗೆ ಜೂನ್ 28ರಂದು ಎರಡನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಪತಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್. ವೇಣು ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಲೂರು ತಾಲೂಕಿನ ಬ್ಯಾಡರಹಳ್ಳಿ ಯಲ್ಲಿ ಬೆಳಗ್ಗೆ 10 ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯನ್ನು ಮಾಜಿ ಶಾಸಕ ಎ. ಟಿ ರಾಮಸ್ವಾಮಿ ನೆರವೇರಿಸಲಿದ್ದಾರೆ .

ಸಂಸದ ಶ್ರೇಯಸ್ ಪಟೇಲ್, ಮಾಜಿ ಶಾಸಕರಾದ ಎಚ್. ಎಮ್ ವಿಶ್ವನಾಥ್ ,ಎಚ್. ಕೆ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಮುರಳಿ ಮೋಹನ್, ಮಹಾನಗರ ಪಾಲಿಕೆ ಮಹಾಪೌರ ಚಂದ್ರೇಗೌಡ, ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗುಡೂರು, ಕಾರ್ಯಕಾರಿ ಸಮಿತಿ ಸದಸ್ಯ ಎಚ್‌.ಬಿ ಮದನ ಗೌಡ , ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ರವಿ ನಾಗಲಗೋಡು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಕೂಟಕ್ಕೆ ಜಿಲ್ಲೆಯ ಎಲ್ಲಾ ಪತ್ರಕರ್ತರು ಆಗಮಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಹಾಗೂ ಎಲ್ಲರು ಕ್ರೀಡಾಕೂಟಕ್ಕೆ ಪೂರಕವಾದ ಉಡುಪಿನೊಂದಿಗೆ ಆಗಮಿಸುವಂತೆ ಮನವಿ ಮಾಡಿದರು .

ಕೆಸರುಗದ್ದೆ ಕ್ರೀಡಾಕೂಟದಲ್ಲಿ ಹಗ್ಗ ಜಗ್ಗಾಟ, ವಾಲಿಬಾಲ್, ಕೆಸರುಗದ್ದೆ ಓಟದ ಸ್ಪರ್ಧೆ ಸೇರಿದಂತೆ ಇತರೆ ಕ್ರೀಡೆಗಳು ಜರುಗಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಎಚ್.ಟಿ ಮೋಹನ್ ಕುಮಾರ್, ಕಾರ್ಯದರ್ಶಿ ಪಿ.ಎ. ಶ್ರೀನಿವಾಸ್ ,ಸಿ .ಬಿ ಸಂತೋಷ್ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.