ಹಾಸನ, ಜೂನ್ 17, 2025: ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಮಳೆಯಾಗಿದೆ. ಜಲಾಶಯದಲ್ಲಿ ಕೇವಲ 12.75 ಅಡಿ ನೀರು ಸಂಗ್ರಹಕ್ಕೆ ಸ್ಥಳಾವಕಾಶ ಉಳಿದಿದ್ದು, ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ, ಹೇಮಾವತಿ ಜಲಾಶಯದಿಂದ ಯಾವುದೇ ಸಮಯದಲ್ಲಿ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ಹೇಮಾವತಿ ನದಿ ಪಾತ್ರ, ದಂಡೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ.

ಹೇಮಾವತಿ ಯೋಜನಾ ವೃತ್ತದ ಸೂಪರಿಂಟೆಂಡೆಂಗ್ ಇಂಜಿನಿಯರ್ ಜ್ಯೋತಿ.ಬಿ.ಕೆ. ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಜನರು ಎಚ್ಚರಿಕೆ ವಹಿಸಿ, ಸ್ಥಳೀಯ ಆಡಳಿತದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೋರಲಾಗಿದೆ.










