ಬೇಲೂರು: ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಡಾ. ನಾರಾಯಣಸ್ವಾಮಿ ಅವರು ಅಭಿಪ್ರಾಯಪಟ್ಟರು.
ಬೇಲೂರು ತಾಲೂಕಿನ ಬಿಕ್ಕೋಡು ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಆಟೋ ನಿಲ್ದಾಣದಲ್ಲಿ ಡಾ.ನಾರಾಯಣಸ್ವಾಮಿ ಹುಟ್ಟು ಹಬ್ಬದ ಅಂಗವಾಗಿ ಆಟೋ ಚಾಲಕರು ಮತ್ತು ಮಾಲೀಕರಿಗೆ, ಹಾಗೂ ಸಾರ್ವಜನಿಕರಿಗಾಗಿ ಆಯೋಜನೆ ಮಾಡಿದ್ದ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಟೋ ಚಾಲಕರು ಗ್ರಾಮೀಣ ಜನತೆ ತಮ್ಮ ಹಾಗೂ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಸಮಸ್ಯೆ ಎದುರಾದರೆ ನಿರ್ಲಕ್ಷ್ಯ ತೋರದೆ ತಕ್ಷಣವೇ ಚಿಕಿತ್ಸೆ ಪಡೆಯಬೇಕು.
ಆಟೋ ಚಾಲಕರು ತಮ್ಮ ಒತ್ತಡದ ಕೆಲಸದಿಂದ ಸರಿಯಾದ ನಿದ್ದೆ ಮಾಡಲು ಸಾಧ್ಯವಿಲ್ಲ, ಸರಿಯಾದ ಸಮಯಕ್ಕೆ ಆಹಾರ ಸೇವಿಸಲು ಸಾಧ್ಯವಾಗುವುದಿಲ್ಲ, ಇದರಿಂದ ಬಿಪಿ, ಶುಗರ್, ಹೃದಯ ಸಂಬಂಧಿ ಖಾಯಿಲೆಗಳು ಸೃಷ್ಟಿಯಾಗುತ್ತವೆ.
ಆದ್ದರಿಂದ ಆಟೋ ಚಾಲಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಉತ್ತಮ ಆಹಾರ ಸೇವನೆ ಮತ್ತು, ಆರೋಗ್ಯ ತಪಾಸಣೆ ಮಾಡಿಸುವುದು ಬಹುಮುಖ್ಯ ಎಂದು ತಿಳಿಸಿದ ಅವರು, ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ಸಾರ್ವಜನಿಕರು ಸಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತರಾಗಿರಬೇಕು. ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಭಾಗದ ಜನ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಮೃತಪಡುತ್ತಿದ್ದಾರೆ.
ಗ್ರಾಮೀಣ ಜನತೆ ಕೃಷಿ, ಹೈನುಗಾರಿಕೆ ಚಟುವಟಿಕೆ ಒತ್ತಡದ ನಡುವೆ ಆರೋಗ್ಯ ನಿರ್ಲಕ್ಷಿಸುತ್ತಾರೆ. ಆರಂಭದಲ್ಲೇ ಚಿಕಿತ್ಸೆ ನೀಡಲು ಆರೋಗ್ಯ ಶಿಬಿರಗಳು ಪೂರಕ ಎಂದು ಸಲಹೆ ನೀಡಿದರು.
There is no greater blessing than health. Dr. Narayanaswamy opined that everyone who works under pressure should pay more attention to their health.










