ಸಾರ್ವಜನಿಕರ ಕುಂದುಕೊರತೆ ಆಲಿಸಲು ಜ.16ರಂದು ಸಕಲೇಶಪುರಕ್ಕೆ ಕಂದಾಯ ಹಾಗೂ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ

This is an opportunity for the villagers to quickly resolve all their documents within the legal framework," he said.

ಸಕಲೇಶಪುರ: ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಕಂದಾಯ ಸಚಿವ ಹಾಗೂ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಇದೇ ತಿಂಗಳ 16ನೇ ತಾರೀಖು ಶುಕ್ರವಾರ ಸಕಲೇಶಪುರ ತಾಲೂಕಿಗೆ ಆಗಮಿಸಲು ಸಿದ್ಧರಾಗಿದ್ದಾರೆ ಎಂದು ಗ್ಯಾರೆಂಟಿ ಯೋಜನೆಯ ಅಧ್ಯಕ್ಷ ಮುರಳಿಮೋಹನ್ ಅವರು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಕೃಷ್ಣ ಬೈರೇಗೌಡರು ಕಳೆದ ಕೆಲ ತಿಂಗಳಿನಲ್ಲಿ ಅಚ್ಚುಕಟ್ಟಾಗಿ ಸಾರ್ವಜನಿಕತೆಯ ಹಿತಕ್ಕಾಗಿ ಕಾರ್ಯನಿರ್ವಹಿಸಿ ಜನಮನ ಗೆದ್ದಿರುವ ಕುರಿತು ಮುರಳಿಮೋಹನ್ ಪ್ರಶಂಸಿಸಿದರು. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ ಪ್ರತಿ ತಾಲೂಕಿನಲ್ಲಿ ಜನಸ್ಪಂದನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಕಲೇಶಪುರದಲ್ಲೂ ತಾಲೂಕು ಕಚೇರಿ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ತಾಲೂಕಿನ 26 ಗ್ರಾಮ ಪಂಚಾಯಿತಿಗಳು ಹಾಗೂ ಮುನ್ಸಿಪಲ್ ಕೌನ್ಸಿಲ್ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. “ಯಾವ ಕೆಲಸಗಳು ಬಾಕಿಯಿವೆ, ಸಾರ್ವಜನಿಕರಿಗೆ ಏನು ತುರ್ತು ಅಗತ್ಯವಿದೆ ಎಂಬುದನ್ನು ಗುರುತಿಸಿ ಸಚಿವರ ಸಮ್ಮುಖದಲ್ಲಿ ಪರಿಹಾರ ಸೂಚಿಸಲು ಅಧಿಕಾರಿಗಳು ಸಿದ್ಧರಾಗಬೇಕು,” ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರ್ಮುಡಿ ಚಂದ್ರು ಅವರು, “ಮೊದಲ ಬಾರಿಗೆ ಸಚಿವರು ಜನಸ್ಪಂದನಕ್ಕಾಗಿ ಬರುತ್ತಿರುವುದು ಜಿಲ್ಲೆಯ ಸಾರ್ವಜನಿಕರಿಗೆ ಸಂತೋಷದ ವಿಚಾರ. ತೆರಿಗೆ ಇಲಾಖೆಯಲ್ಲಿ ‘ಪೋಡ್’ ಸಮಸ್ಯೆ, ಖಾತಾ ತಿದ್ದುಪಡಿ ಸೇರಿದಂತೆ ಹಲವು ಅರ್ಜಿ ದಾಖಲೆ ಸಂಬಂಧಿತ ವಿಷಯಗಳು ಸರಾಗವಾಗಿ ನಡೆಯುತ್ತಿಲ್ಲ ಎಂಬುದು ಕಂಡುಬಂದಿದೆ.

ಗ್ರಾಮಸ್ಥರು ತಮ್ಮ ಎಲ್ಲಾ ದಾಖಲೆಗಳನ್ನು ತ್ವರಿತವಾಗಿ ಕಾನೂನಿನ ಚೌಕಟ್ಟಿನಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಇದು ಸೂಕ್ತ ಅವಕಾಶ,” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬೈಕೆರೆ ದೇವರಾಜ್, ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಯ್ಯದ್ ಮುಫೀಜ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

This is an opportunity for the villagers to quickly resolve all their documents within the legal framework,” he said.