ಹಾಸನ: ಹಗರೆ ಬಳಿ ಟಿಪ್ಪರ್–ಆಟೋ–ಕಾರು ನಡುವೆ ಭೀಕರ ಅಪಘಾತ: 8 ಮಂದಿಗೆ ಗಾಯ, ಮೂವರು ಗಂಭೀರ

total of eight people were injured in a series of accidents that took place near Hagare in Belur taluk of the district this morning, and the condition of three is critical.

ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆ ಸಮೀಪ ಇಂದು ಬೆಳಿಗ್ಗೆ ನಡೆದ ಸರಣಿ ಅಪಘಾತದಲ್ಲಿ ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಮಾಹಿತಿಯಂತೆ, ತುಮಕೂರು ಮೂಲದ ಮೂವರು ಪ್ರಯಾಣಿಸುತ್ತಿದ್ದ ಕಾರು ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದ ಆಟೋವನ್ನು ಓವರ್‌ಟೇಕ್ ಮಾಡುವ ವೇಳೆ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ನುಜ್ಜುಗುಜ್ಜಾಗಿದ್ದು, ಟಿಪ್ಪರ್‌ನ ಚಕ್ರ ಕಳಚಿ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು, ಆಟೋದಲ್ಲಿದ್ದ ನಾಲ್ವರು ಹಾಗೂ ಟಿಪ್ಪರ್ ಚಾಲಕ ಗಾಯಗೊಂಡಿದ್ದಾರೆ.

ಗಾಯಾಳುಗಳಿಗೆ ಬೇಲೂರು ಸರ್ಕಾರಿ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಮೂವರನ್ನು ಹೆಚ್ಚಿನ ಚಿಕಿತ್ಸೆಗೆ ಹಾಸನದ ಹಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಸ್ಥಳಕ್ಕೆ ಹಳೇಬೀಡು ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಚಾರ ವ್ಯವಸ್ಥೆಯನ್ನು ಪುನಃಸ್ಥಾಪಿಸಿದ್ದಾರೆ.