ಹಾಸನ : ಉದಯ ವರದಿ ಪತ್ರಿಕೆ ಸಂಪಾದಕ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿ ಪುರಸ್ಕೃತ ವೆಂಕಟೇಶ್ ಅವರು ಮತ್ತೊಂದು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಅನ್ವೇಷಣಾ ಸಾಂಸ್ಕೃತಿಕ ಅಕಾಡೆಮಿ ನೀಡುವ ಸಂಪಾದಕ ರತ್ನ ರಾಜ್ಯೋತ್ಸವ ಪ್ರಶಸ್ತಿಗೆ ವೆಂಕಟೇಶ್ ಆಯ್ಕೆಯಾಗಿದ್ದಾರೆ. ಕಳೆದ ೩೦ ವರ್ಷಗಳಿಂದ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರರಾಗಿ, ದೃಶ್ಯ ಮಾಧ್ಯಮ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದು,ಕಳೆದ ೫ ವರ್ಷಗಳಿಂದ ಉದಯ ವರದಿ ಪತ್ರಿಕೆ ಸಂಪಾದಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರ ಸೇವೆ ಪರಿಗಣಿಸಿ ಈ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಅನ್ವೇಷಣಾ ಸಾಂಸ್ಕೃತಿಕ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶೀಘ್ರವೇ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವೆಂಕಟೇಶ್ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.










