ಹಾಸನ: ಜೀವನದಲ್ಲಿ ತಾವು ಏನಾಗಬೇಕು ಎಂಬ ಗುರಿ ಇಟ್ಟುಕೊಂಡು ಆ ಗುರಿ ತಲುಪುವ ಸಲುವಾಗಿ ಪ್ರಯತ್ನಿಸಿದರೆ ಯಶಸ್ಸು ಕಾಣಲು ಸಾಧ್ಯ ಎಂದು ನವಕೀಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ನ ಪ್ರಾಂಶುಪಾಲರಾದ ವೇಣುಗೋಪಾಲ್ ರಾವ್ ತಿಳಿಸಿದರು.
ಕಂದಲಿ ಬಳಿಯ ನವಕೀಸ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ನಡೆದ ವೃತ್ತಿ ಭಾಷಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಜ್ಞಾನ ಹೆಚ್ಚಿಸಿಕೊಂಡಲ್ಲಿ ಸಮಾಜದಲ್ಲಿ ಗೌರವಯುತ ಬದುಕು ಸಾಗಿಸಲು ಸಾಧ್ಯ ಎಂದರು.
ಇತ್ತೀಚಿನ ದಿನಗಳಲ್ಲಿ ವೇಗದಲ್ಲಿ ಬೆಳೆಯುತ್ತಿರುವ ಪ್ರಪಂಚದಲ್ಲಿ ಪ್ರತಿಯೊಂದು ವಿಚಾರದಲ್ಲಿ ವೇಗ ಹೆಚ್ಚಾಗುತ್ತಿದೆ. ಅದಕ್ಕನುಗುಣವಾಗಿ ಇಂದಿನ ಯುವ ಪೀಳಿಗೆ ಪೂರಕ ಶೈಕ್ಷಣಿಕ ಶಕ್ತಿ ಪಡೆದುಕೊಳ್ಳುವ ಅಗತ್ಯವಿದೆ ಹಾಗಾಗಿ ಎಲ್ಲವನ್ನೂ ಒಂದೇ ಸೂರಿನಲ್ಲಿ ಒದಗಿಸುವ ಸಲುವಾಗಿ ಎಂ.ಎಸ್ ರಾಮಯ್ಯ ನವಕೀಸ್ ಕಾಲೇಜ್ ಒದಗಿಸುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು. ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಸಂಘದ ಅಧ್ಯಕ್ಷ ಪ್ರಶಾಂತ್ ಕುಮಾರ್, ಚ.ರಾ.ಪ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ರಾಮೇಗೌಡ, ಗಣಪತಿ, ಸಂಸ್ಥೆಯ ಸಿಬ್ಬಂದಿಗಳಾದ ಶ್ರೀಪಾದ್ ಮಾರ್ಕಂಡೇ, ರಾಜಲಕ್ಷ್ಮಿ, ಇತರರು ಇದ್ದರು.
Venugopal Rao, Principal of Navakis College of Engineering, said that if you set a goal for yourself and work hard to achieve that goal, you can achieve success.










