
ಹಾಸನ: ಚನ್ನರಾಯಪಟ್ಟಣದ ಸರ್ಕಾರಿ ಮಾಧ್ಯಮಿಕ ಶಾಲಾ ಆವರಣದಲ್ಲಿ ಜುಲೈ ೨೦ರಂದು ಭಾನುವಾರ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಪರ್ವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಾಂಕ್ ಗೋಪಾಲಸ್ವಾಮಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಈ ವಿಷಯ ತಿಳಿಸಿದ ಅವರು, ಕಾರ್ಯಕ್ರಮದ ಪ್ರಮುಖ ಉದ್ದೇಶಗಳೆಂದರೆ ಅಂದು ಜಿಲ್ಲಾ ಯುವ ಕಾಂಗ್ರೆಸ್‌ಗೆ ಕಳೆದ ಆಗಸ್ಟ್ನಲ್ಲಿ ಚುನಾಯಿತರಾದ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ.
ಕಾರ್ಯಕ್ರಮಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಾಜಿ ಸಂಸದ ಡಿ.ಕೆ. ಸುರೇಶ್, ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ಶಾಸಕ ಹಾಗೂ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ,
ಶಾಸಕ ರಿಜ್ವಾನ್ ಹರ್ಷದ್, ರಾಷ್ಟಿçÃಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್‌ಗೌಡ ಸೇರಿದಂತೆ ಜಿಲ್ಲೆಯ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.









