4.2 C
Munich
Home ಜಿಲ್ಲೆ ಹಾಸನ: ಕರ್ತವ್ಯ ಲೋಪ – ಹುಣಸವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವರ್ಗಾವಣೆ

ಹಾಸನ: ಕರ್ತವ್ಯ ಲೋಪ – ಹುಣಸವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವರ್ಗಾವಣೆ

Zilla Panchayat Chief Executive Officer B.R. Purnima has ordered the transfer of Panchayat Development Officer K.S. Ashok to another panchayat on charges of dereliction of duty in Hunasavalli Gram Panchayat in Alur Taluk.

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹುಣಸವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ಲೋಪವೆಸಗಿರುವ ಆರೋಪದಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್.ಅಶೋಕ್ ಅವರನ್ನು ಬೇರೆ ಪಂಚಾಯಿತಿಗೆ ವರ್ಗಾವಣೆ ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ ಆದೇಶಿಸಿದ್ದಾರೆ.

ಗ್ರಾಮ ಪಂಚಾಯಿತಿ ಗಮನಕ್ಕೆ ಬರದಂತೆ ಹೊಸ ಬಡಾವಣೆಗಳಿಗೆ ಇ-ಸ್ವತ್ತು ವಿತರಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸೇರಿದಂತೆ, 15ನೇ ಹಣಕಾಸಿನ ಯೋಜನೆ ಕಾಮಗಾರಿಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ  ತೋರಿರುವುದರಿಂದ ಗ್ರಾಮಗಳಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲವೆಂದು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಚುನಾಯಿತ ಸದಸ್ಯರು, ಶಾಸಕ ಸಿಮೆಂಟ್ ಮಂಜು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು.

ಈ ವರದಿ ಆಧರಿಸಿ ಕೆ.ಎಸ್.ಅಶೋಕ ಅವರನ್ನು ಬೇಲೂರು ತಾಲ್ಲೂಕಿನ ನಾರಾಯಣಪುರ ಗ್ರಾಮ ಪಂಚಾಯಿತಿಗೆ ನಿಯೋಜಿಸಿದೆ ಹಾಗೂ ನಾರಾಯಣಪುರ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಚ್.ವಿ.ಸಹನ ಅವರನ್ನು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಜಿಲ್ಲಾ ಪಂಚಾಯಿತಿ ಕಚೇರಿಯ ಡಿ.ಆರ್.ಡಿ.ಎ ಶಾಖೆಯಲ್ಲಿ ಕಾರ್ಯನಿರ್ವಹಿಸಲು ಆದೇಶಿಸಿದೆ.

error: Content is protected !!